ಗುರುವಾರ, ಜೂನ್ 11, 2026

ಸುಂದರೀಶತಕ -೪೯

ಸಂಸ್ಕೃತ ಮೂಲ 

ಸಸ್ಮಿತಮರುಣಕಪೋಲಂ ರಚಿತಭ್ರೂಭಂಗಮಂಚಿತವ್ರೀಡಮ್ /
ಸಂಪೃಕ್ತಭಾವರುಚಿರಂ ವದನಂ ತಸ್ಯಾ: ಸ್ಮರಾಮಿ ಸಖೇ //

ಕನ್ನಡ ಅನುವಾದ 

    ' ಹೇ ಸಖ!  ನಗುವಿನೊಂದಿಗೆ ಕೆಂಪಾದ ಅವಳ ಕೆನ್ನೆಗಳು, ಕೋಪದಿಂದ ಗಂಟಿಕ್ಕಿದ ಹುಬ್ಬುಗಳು, ನಾಚಿಕೆಯಿಂದ ಬಾಗಿದ ಮುಖ, ಈ ಮಿಶ್ರ ಭಾವಗಳಿಂದ ಸುಂದರವಾದ ಆ  ನನ್ನ ಪ್ರಿಯತಮೆಯ ಮುಖವನ್ನು ಈಗಲೂ ಸ್ಮರಿಸುತ್ತೇನೆ!'
     ಇಲ್ಲಿ ಪ್ರಾಯಶಃ ನಾಯಕನು ಕೋಪಗೊಂಡ ತನ್ನ ನಾಯಕಿಯನ್ನು ಸಮಾಧಾನ ಮಾಡಿದಾಗ ಮೂಡಿದ ಚಿತ್ರಣವನ್ನು ತನ್ನ ಸಖನಿಗೆ ವರ್ಣಿಸುತ್ತಿದ್ದಾನೆ. ಅವನು ಅವಳನ್ನು ಸಮಾಧಾನಗೊಳಿಸುತ್ತಾ ಪ್ರಾಯಶಃ ಚುಂಬಿಸಿದ್ದಾನೆ.  ಆಗ ಅವಳು ಕೋಪವನ್ನು ಬಿಟ್ಟರೂ ಇನ್ನೂ ಅವಳ ಹುಬ್ಬುಗಳು ಗಂಟಿಕ್ಕಿಕೊಂಡಿವೆ. ಆದರೆ ಅವನ ಪ್ರೀತಿಗೆ ಕರಗಿ ಅವನ ಚುಂಬನದಿಂದ ಕಿರುನಗೆ ಮೂಡಿಸಿದ್ದಾಳೆ ಹಾಗೂ ಅವಳ ಕೆನ್ನೆಗಳು ಕೆಂಪಾಗಿವೆ. ಜೊತೆಗೆ ನಾಚಿ ತಲೆ ತಗ್ಗಿಸಿದ್ದಾಳೆ. ಈ ಎಲ್ಲ ಮಿಶ್ರಿತ ಭಾವಗಳ ಅವಳ ಮುಖ ಬಹಳ ಸುಂದರವಾಗಿ ಕಾಣುತ್ತಿದ್ದು ಈಗಲೂ ಅದನ್ನು ಸ್ಮರಿಸುತ್ತೇನೆ ಎಂದು ಅವನು ತನ್ನ ಸಖನಿಗೆ ಹೇಳುತ್ತಿದ್ದಾನೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ