ಜ್ಞಾತಾಸಿ ಗೃಹಜನೈರಿತಿ ಕಥಿತೇ ಸಂಭ್ರಾಂತತಾರಕಂ ದೂತ್ಯಾ /
ಅರುಣಮಪಿ ಮಾನವತ್ಯಾ: ಸ್ಮರಾಮಿ ಪಾಂಡೂಭವದ್ವದನಮ್ //
ಕನ್ನಡ ಅನುವಾದ
' ನಿನ್ನ ರಹಸ್ಯ ಪ್ರೇಮದ ವಿಷಯ ಮನೆಯವರಿಗೆಲ್ಲಾ ಗೊತ್ತಾಗಿದೆ ಎಂದು ದೂತಿಯು ನನ್ನ ಪ್ರಿಯತಮೆಗೆ ಹೇಳಲು, ಅವಳ ಕಣ್ಣುಗಳ ಪಾಪೆಗಳು ಸಂಭ್ರಾಂತಗೊಂಡವು ಹಾಗೂ ಕೋಪಗೊಂಡಿದ್ದ ಅವಳ ಮುಖ ಕೆಂಪಾಗಿದ್ದರೂ ಬಿಳುಚಿಕೊಂಡಿದ್ದನ್ನು ನಾನು ಈಗಲೂ ಸ್ಮರಿಸುತ್ತೇನೆ!'
ಇಲ್ಲಿ ನಾಯಿಕೆಯು ನಾಯಕನಲ್ಲಿ ಕುಪಿತಗೊಂಡು ಕುಳಿತಿದ್ದಾಳೆ. ಆಗ ಅವಳ ದೂತಿಯು ಬಂದು ಅವಳ ರಹಸ್ಯ ಪ್ರೇಮದ ವಿಷಯ ಮನೆಯವರಿಗೆಲ್ಲಾ ಗೊತ್ತಾಗಿದೆ ಎಂದು ಹೇಳಿದ್ದಾಳೆ. ಇದರಿಂದ ಅವಳು ಗಾಬರಿಗೊಳ್ಳಲು ಅವಳ ಕಣ್ಣುಗಳ ಪಾಪೆಗಳು ಸಂಭ್ರಾಂತಗೊಂಡಿವೆ! ಕೋಪದಿಂದ ಕೆಂಪಾಗಿದ್ದ ಅವಳ ಮುಖವು ಕೂಡಲೇ ಭಯದಿಂದ ಬಿಳುಚಿಕೊಂಡಿದೆ! ಕೋಪವು ಭಯಕ್ಕೆ ತಿರುಗುವ ಹಾಗೂ ಕೆಂಪಾದ ಮುಖ ಬಿಳುಚಿಕೊಳ್ಳುವ ಈ ಸುಂದರ ಮುಖಭಾವವನ್ನು ಈಗಲೂ ಸ್ಮರಿಸುತ್ತೇನೆ ಎಂದು ನಾಯಕನು ಹೇಳುತ್ತಿದ್ದಾನೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ